ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ಸಾವು

Dead Body
Published on

ತುಮಕೂರು: ನಗರದ ಸರ್ಕಾರಿ ಆಸ್ಪತ್ರೆ ಆವರಣ ಟ್ರಾಮಾಕೇರ್​ ಸೆಂಟರ್​ ಬಳಿ ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಏ. 4ರಂದು ಮೃತಪಟ್ಟಿರುತ್ತಾನೆ. ಈತನ ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ.

ಮೃತನು 175 ಸೆಂ.ಮೀ. ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಈತನ ಮೈಮೇಲೆ ಆಕಾಶ ನೀಲಿ ಹಾಗೂ ಹಳದಿ ನೀಲಿ ಮಿಶ್ರಿತ ಟೀ ಷರ್ಟ್​ ಹಾಗೂ ಸಿಮೆಂಟ್​ ಬಣ್ಣದ ಪ್ಯಾಂಟ್​ ಇರುತ್ತದೆ.

ವಾರಸುದಾರರು ಯಾರಾದರೂ ಇದ್ದಲ್ಲಿ ದೂ.0816- 2278388, ಮೊ.9480802945-, 00-30 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net