ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Dev
Published on

ತುಮಕೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ನಿಗಮಗಳಿಂದ 2023-24ನೇ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನ.10ರ ವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿ., ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿ., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿ., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ನಿ., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿ., ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮ ನಿ., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿ., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿ., ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ (https://sevasindhu.karnataka.gov.in) ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ನ.10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net