ಸಿದ್ಧಗಂಗಾ ಮಠದಲ್ಲಿ ರೈತರಿಗೆ 101 ದೇಸಿ ಗೋವು ವಿತರಣೆ

03TMK_HASU
Published on

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ದೇಸಿ ಹಸುಗಳ ಬಗ್ಗೆ ಜಾಗೃತಿ ಮೂಡಿಸಲು ರೈತರಿಗೆ 101 ಹಸುಗಳನ್ನು ಉಚಿತವಾಗಿ ವಿತರಿಸಲಾಯಿತು.

ಬಿಜೆಪಿ ರೈತ ಮೋರ್ಚಾ ಹಾಗೂ ಸುಭಾಷ್ ಪಾಳೆಕರ್ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಆಂದೋಲನ ವೇದಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ರೈತರಿಗೆ 101 ನಾಟಿ ಗೋವುಗಳ ವಿತರಿಸಲಾಯಿತು.

ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ಧಲಿಂಗಸ್ವಾಮೀಜಿ, ಸಂಸದ ಜಿ.ಎಸ್.ಬಸವರಾಜು, ಸ್ಫೂರ್ತಿ ಡೆವಲಪರ್ಸ್ ನ್ನ ಎಸ್.ಪಿ.ಚಿದಾನಂದ್, ಬಿಜೆಪಿ ಮುಖಂಡರಾದ ಎಸ್.ಶಿವಪ್ರಸಾದ್, ವಿದ್ಯಾ, ಜಗದೀಶ್, ಎಂ.ಬಿ.ನಂದೀಶ್, ವಿಜಯಕುಮಾರ್, ಸಿದ್ಧರಾಮಣ್ಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net