ವಿದೇಶದಿಂದ ವಾಪಸಾದ ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ನಿರ್ವಹಣೆ ಸಭೆ

6666666
Published on

ತುಮಕೂರು: ಬರದ ನಡುವೆಯೂ ವಿದೇಶ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಶುಕ್ರವಾರ ಜಿಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆದರು.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬರದ ತೀವ್ರತೆ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಒಂದು ವರದಿಯನ್ನ ಸಲ್ಲಿಸಿದ್ದೇವೆ, ಮತ್ತೊಂದು ವರದಿ ಸಿದ್ಧಗೊಳ್ಳುತ್ತಿದ್ದು ಶೀಘ್ರದಲ್ಲಿಯೇ ಸಲ್ಲಿಸಲಿದ್ದೇವೆ ಎಂದರು.

ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆಯಿದ್ದು ಸೂಕ್ತ ಮುಂಜಾಗ್ರತೆ ವಹಿಸಲು ಅಗತ್ಯ ಹಣ ನೀಡಿರುವ ಸರ್ಕಾರ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ಪಿಡಿ ಖಾತೆಯಲ್ಲಿ 19ಕೊಟಿ ರೂ. ಲಭ್ಯವಿದೆ, ರಾಜ್ಯದಲ್ಲಿ ಸುಮಾರು 400ಕೋಟಿ ರೂ. ಬರ ನಿರ್ವಹಣೆಗೆ ಕೊಟ್ಟಿದ್ದೇವೆ. ಜಿಲ್ಲಾಧಿಕಾರಿ ಪ್ರತಿ ತಾಲೂಕಿನಲ್ಲಿ ಪರಿಶೀಲನೆ ಮಾಡಿ ಹಣ ಖರ್ಚು ಮಾಡಬಹುದು ಎಂದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ ಸಿಇಒ ಜಿ.ಪ್ರಭು, ಸ್ಮಾರ್ಟ್ಸಿಟಿ ಎಂಡಿ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ಅಧಿಕ್ಷಕ ಕೆ.ಅಶೋಕ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net