ಪ್ರೌಢಶಾಲೆ ವಿದ್ಯಾರ್ಥಿಗಳಿಗೂ ಕೋಳಿಮೊಟ್ಟೆ, ಬಾಳೆಹಣ್ಣು; ಜಿಲ್ಲೆಯ 2.26 ಲಕ್ಷ ಮಕ್ಕಳಿಗೆ ಯೋಜನೆಯ ಲಾಭ

MOTTE
Published on

ತುಮಕೂರು: ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅಂಗವಾಗಿ ಪೌಢಶಾಲಾ ಮಕ್ಕಳಿಗೂ ಪೂರಕ ಪೌಷ್ಠಿಕ ಆಹಾರ ವಿತರಣೆಗೆ ನಗರದ ಎಂಪ್ರೆಸ್ ಸರ್ಕಾರಿ ಶಾಲೆಯಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಚಾಲನೆ ನೀಡಿದ್ದು, ಜಿಲ್ಲೆಯ 2.26 ಲಕ್ಷ ಮಕ್ಕಳು ಯೋಜನೆಯ ಲಾಭ ಪಡೆಯಲಿದ್ದಾರೆ.

ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ 14 ವರ್ಷದವರೆಗೆ ಕಡ್ಡಾಯವಾಗಿ ಗುಣಮಟ್ಟದ ಉಚಿತ ಶಿಕ್ಷಣ ನೀಡವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಯೋಜನೆಗೆ ಚಾಲನೆ ನೀಡಿದ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಸರ್ಕಾರಗಳು ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಸುಸಜ್ಜಿತ ಕೊಠಡಿ, ಆಟದ ಮೈದಾನವಿರುವ ಉತ್ತಮ ಪರಿಸರ, ಪೌಷ್ಠಿಕ ಆಹಾರ ನೀಡುವ ಜವಬ್ಧಾರಿಯನ್ನು ವಹಿಸಿಕೊಂಡಿದೆ ಎಂದರು.

ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಎಚ್.ವಿ.ವೆಂಕಟೇಶ್, ಮೇಯರ್ ಪ್ರಭಾವತಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಡಿಡಿಪಿಐ ರಂಗಧಾಮಯ್ಯ, ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್‌ಕುಮಾರ್ ಶಹಪುರವಾಡ್ ಬಿಇಒ ಡಾ.ಸೂರ್ಯಕಲಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net