

ತುಮಕೂರು: ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಠಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ಐಎಎಸ್, ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ಸಮುದಾಯದ ಅಭ್ಯರ್ಥಿ ಆನ್‌ಲೈನ್ ಜಾಲತಾಣ ವಿಳಾಸ https://sevasindhu.karnataka.gov.in ಮೂಲಕ ಸೆ.16ರೊಳಗೆ ಅರ್ಜಿ ಸಲ್ಲಿಸಬಹುದು.