ಪಿ.ಎಂ.ವಿಶ್ವಕರ್ಮ ಯೋಜನೆಯಲ್ಲಿ ಸೌಲಭ್ಯ

vishwakarma (1)
Published on

ತುಮಕೂರು: ಭಾರತ ಸರ್ಕಾರದ ಪಿ.ಎಂ-ವಿಶ್ವಕರ್ಮ ಯೋಜನೆಯಲ್ಲಿ 18 ಹೊಸ ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಸವಲತ್ತುಗಳನ್ನು ನೀಡಲಾಗುವುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಐ.ಡಿ.ಕಾರ್ಡ್, ಕೌಶಲ್ಯಾಭಿವೃದ್ಧಿ, ಉಪಕರಣಗಳಿಗೆ ಪ್ರೋತ್ಸಾಹ, ಕ್ರೆಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ, ಮಾರುಕಟ್ಟೆ ಬೆಂಬಲ ಸೌಲಭ್ಯ ನೀಡಲಾಗುತ್ತಿದೆ.

ಕುಶಲಕರ್ಮಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕ, ಜಿಲ್ಲಾ ಕೈಗಾರಿಕಾ ಕೇಂದ್ರ, ತುಮಕೂರು ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಕನ್ನಡ ಸಂಸ್ಕೃತಿ ಇಲಾಖೆ ಕಟ್ಟಡ, ಕೆಎಸ್‌ಆರ್‌ಟಿಸಿ ಬಸ್ ಸ್ಟಾö್ಯಂಡ್ ಎದುರು, ತುಮಕೂರು. ಇವರನ್ನು ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net