

ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ನೇಕಾರರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವು ನೀಡಲು ಅರ್ಹ ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರು, ಕಾರ್ಮಿಕರಿಂದ ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ ಕೈಮಗ್ಗ, ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ, ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಚಟುವಟಿಕೆಗಳಿಗಾಗಿ ವಾರ್ಷಿಕ 5000 ರೂ. ಆರ್ಥಿಕ ನೆರವು ನೀಡಲಾಗುವುದು. ಕಳೆದ ಸಾಲಿನಲ್ಲಿ ನೋಂದಾವಣೆಯಾಗದ ನೇಕಾರರು ಆರ್ಥಿಕ ನೆರವು ಪಡೆಯಲು ಹೊಸ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತ ಕೈಮಗ್ಗ/ವಿದ್ಯುತ್ ಮಗ್ಗ ನೇಕಾರರು ನಿಗಧಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕ, ಕೈಮಗ್ಗ ಮತ್ತು ಜವಳಿ ಇಲಾಖೆ, 5ನೇ ಮುಖ್ಯರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು. ಸಂಪರ್ಕಿಸಿ.