

ತುಮಕೂರು: ಎಸ್‌ಬಿಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದಲ್ಲಿ ಗ್ರಾಮೀಣ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಊಟ ವಸತಿಯೊಂದಿಗೆ 30 ದಿನಗಳ ಹ್ಯಾಂಡ್ ಎಂಬ್ರಾಯ್ಡರಿ ಅಂಡ್ ಫ್ಯಾಬ್ರಿಕ್ ಪೇಂಟಿAಗ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತುಮಕೂರು ಜಿಲ್ಲೆಯ ಕನ್ನಡ ಓದಲು ಹಾಗೂ ಬರೆಯಲು ಬರುವಂತಹ 18 ರಿಂದ 40 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಸೆ.13ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು, ದೂ.0816 2243386, ಮೊ.9449173386, 9738351048 ಸಂಪರ್ಕಿಸಿ.