

ತುಮಕೂರು: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ತುಮಕೂರು ನಗರದಲ್ಲಿ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಎಲ್ಲಾ ಶಾಲೆ, ಕಾಲೇಜುಗಳಿಗೆ ಅ.27ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.
ಈಗಾಗಲೇ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪುರಷ ಹಾಗೂ ಮಹಿಳೆಯರ ವಿಭಾಗದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಅರ್ಹತೆ ಪಡೆದಿರುವ ಒಟ್ಟು 10 ಸಾವಿರ ಸ್ಪರ್ಧಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ.27 ರಿಂದ 29 ರವರೆಗೆ ತುಮಕೂರಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 3 ದಿನಗಳ ಈ ಕೂಟಕ್ಕೆ ರಾಜ್ಯ ಸರ್ಕಾರವು 2 ಕೋಟಿ ರೂ., ಅನುದಾನ ಕೂಡ ನೀಡಿದೆ.