ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

sports day
Published on

ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಅ.6, 7 ಮತ್ತು 8 ರಂದು ನಗರದಲ್ಲಿ ಆಯೋಜನೆ ಮಾಡಲಾಗುತ್ತಿದೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಭದಲ್ಲಿ ಗುರುವಾರ ಸಭೆ ನಡೆಸಿ, ಕ್ರೀಡಾಕೂಟದಲ್ಲಿ ರಾಜ್ಯದಿಂದ ಸುಮಾರು 6000 ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರೆಲ್ಲರಿಗೂ ಊಟ ಮತ್ತು ವಸತಿಯನ್ನು ವ್ಯವಸ್ಥಿತವಾಗಿ ಮಾಡುವುದಕ್ಕೆ ಕ್ರಮ ವಹಿಸಬೇಕು ಎಂದರು.

ನಗರದ ವಿವಿಧ ಶಾಲಾ- ಕಾಲೇಜು, ವಿಶ್ವವಿದ್ಯಾನಿಲಯದ ಆವರಣಗಳಲ್ಲಿ 17 ಕ್ರೀಡೆಗಳನ್ನು ಏರ್ಪಡಿಸಲು ಸ್ಥಳಗಳನ್ನು ನಿಗಧಿ ಮಾಡಲಾಗಿದೆ ಎಂದರು.
ಸಭೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎನ್.ನರಸಿಂಹರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net