ಅನಾರೋಗ್ಯದಿಂದ ಶಾಸಕ ಕೆ.ಷಡಕ್ಷರಿ ಆಸ್ಪತ್ರೆಗೆ ದಾಖಲು; ಗೃಹ ಸಚಿವ ಪರಮೇಶ್ವರ್ ಭೇಟಿ

TTTTT
Published on

ತುಮಕೂರು: ತಿಪಟೂರು ಶಾಸಕ ಕೆ.ಷಡಕ್ಷರಿ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಚೇತರಿಸಿಕೊಂಡಿದ್ದಾರೆ.

ಬುಧವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಷಡಕ್ಷರಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ಭೇಟಿ ನೀಡಿ ಕೆ.ಷಡಕ್ಷರಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಷಡಕ್ಷರಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net