ಅನಾಥ ಬಾಲಕಿಗೆ ಅತ್ಯಾಚಾರ ಯತ್ನ; ಪೊಲೀಸರ ವಿರುದ್ಧ ಗೃಹ ಸಚಿವ ಗರಂ

18 Dwd 1 (Dr. G.Parameshwar)
Published on

ತುಮಕೂರು: ನಗರದಲ್ಲಿ 7 ವರ್ಷದ ಅನಾಥ ಬಾಲಕಿಯ ಮೇಲೆ ಆಟೋ ಚಾಲಕ ಹಾಡಹಗಲೇ ಅತ್ಯಾಚಾರಕ್ಕೆ ಯತ್ನಿಸಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಚಾರಕ್ಕೆ ಯತ್ನಿಸಿರುವ ಆರೋಪಿಯನ್ನು ಈಗಾಗಲೇ ವಶಕ್ಕೆ ಪಡೆದು ಪೋಕ್ಸೋ ಕಾಯ್ದೆಯಲ್ಲಿ ಪ್ರಕರಣ ಕೂಡ ದಾಖಲು ಮಾಡಲಾಗಿದೆ ಎಂದರು.

ತುಮಕೂರಿನಲ್ಲಿ ಆಟೋಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳಿಗೆ ದಾಖಲೆಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ, ಯಾವುದೊ ತಾಲೂಕಿನಲ್ಲಿ ನೋಂದಣಿ ಮಾಡಿಸಿ ಇನ್ಯಾವುದೋ ತಾಲೂಕಿಲ್ಲಿ ಆಟೋಗಳು ಓಡಾಡುತ್ತಿರುವ ಬಗ್ಗೆ ಕಟ್ಟುನಿಟ್ಟಿನ ಕ್ರಮಜರುಗಿಸಲು ಸೂಚಿಸಲಾಗಿದೆ ಎಂದರು.

ಬಾಲಕಿ ಮೇಲೆ ಅತ್ಯಾಚಾರ ಯತ್ನ ಘಟನೆ ಬಗ್ಗೆ ಗಮನಹರಿಸಲಾಗಿದ್ದು ಜಿಲ್ಲಾಧಿಕಾರಿ ನಿಗಾವಹಿಸಲಿದ್ದಾರೆ, ಹೆಚ್ಚಿನ ಪರಿಣಾಮಕಾರಿ ತನಿಖೆಯ ಅಗತ್ಯವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net