

ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023ರ ಅಂಗವಾಗಿ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 06-18 ವರ್ಷದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
2023-24ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿಪಡಿಸಿರುವ ಅರ್ಜಿ ನಮೂನೆಗಳನ್ನು ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಯುವಜನ ಸೇವೆ ಮತ್ತು ಸಬಲೀಕರಣ ಇಲಾಖೆ, ತುಮಕೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು. ಇವರುಗಳಿಂದ ಪಡೆಯಬಹುದು.
ರಾಜ್ಯ ಪ್ರಶಸ್ತಿಗೂ ಅರ್ಜಿ: ತುಮಕೂರು: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ.
ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ಇವರಿಗೆ ಅ.13 ರೊಳಗೆ ಅರ್ಜಿ ಸಲ್ಲಿಸಬಹುದು.