ಚಿಕ್ಕನಾಯಕನಹಳ್ಳಿ ತಾಲ್ಲೂಕು ಜನಸ್ಪಂದನಾ ಕಾರ್ಯಕ್ರಮ

SSS
Published on

ಚಿಕ್ಕನಾಯಕನಹಳ್ಳಿ: ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಜೂ. 28 ರಂದು ಬೆ. 10 ಗಂಟೆಗೆ ಹುಳಿಯಾರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.


ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಉಪಸ್ಥಿತಿಯಲ್ಲಿ ಕಂದಾಯ, ಪಂಚಾಯತ್ ರಾಜ್, ಅರಣ್ಯ, ಕೃಷಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದಲ್ಲಿ ಸಲ್ಲಿಸಬಹುದು.

ಅಲ್ಲದೇ ಎಲ್ಲಾ ಇಲಾಖೆಯಡಿ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ತುರುವೇಕೆರೆಯಲ್ಲಿ ಜೂ. 26 ತಿಪಟೂರಿನಲ್ಲಿ ಇದೇ 27 ರಂದು ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಸಾರ್ವಜನಿಕರು ಈ ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಿಪಟೂರು ಉಪವಿಭಾಗಧಿಕಾರಿ ಸಪ್ತಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net