

ತುಮಕೂರು: ಉದ್ಯೋಗಾಕಾಂಕ್ಷಿಗಳಿಗಾಗಿ ನವೆಂಬರ್ 9ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಾದರಿ ವೃತ್ತಿ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಮೇಳದಲ್ಲಿ ತುಮಕೂರಿನ ಹೆಸರಾಂತ ಕಂಪನಿಗಳು ಭಾಗವಹಿಸಲಿವೆ.
ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯು, ಪದವಿ, ಐಟಿಐ ಹಾಗೂ ಡಿಪ್ಲೊಮಾ ಪಾಸಾದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅಭ್ಯರ್ಥಿಗಳು NCS (www.ncs.gov.in) ವೆಬ್‌ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊAಡು ಸಂದರ್ಶನ ಸಮಯದಲ್ಲಿ ಓಅS ಐಡಿಯನ್ನು ಒದಗಿಸಬೇಕು. ಆಸಕ್ತರು ತಮ್ಮ ವೈಯಕ್ತಿಕ ವಿವರ ಹಾಗೂ ಗುರುತಿನ ಚೀಟಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಮಾಹಿತಿಗೆ ದೂ.0816 2278488 ಸಂಪರ್ಕಿಸಿ.