ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್; ನೆಚ್ಚಿನ ತಾರೆ ನೋಡಲು ಮುಗಿಬಿದ್ದ ಮಕ್ಕಳು

KL
Published on

ತುಮಕೂರು: ಭಾರತೀಯ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್.ರಾಹುಲ್ ಭಾನುವಾರ ಸಂಜೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಶ್ರೀಸಿದ್ಧಲಿಂಗಸ್ವಾಮೀಜಿ ಆಶಿರ್ವಾದ ಪಡೆದರು.

ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಅವರೊಂದಿಗೆ ರಾಹುಲ್ ಮಠಕ್ಕೆ ಆಗಮಿಸಿದ ಸುದ್ದಿ ತಿಳಿದ ವಿಷಯ ತಿಳಿದ ಶ್ರೀಮಠದ ಸಾವಿರಾರು ಮಕ್ಕಳು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಮುಗಿಬಿದ್ದ ಹಿನ್ನೆಲೆಯಲ್ಲಿ ನಿಯಂತ್ರಿಸಲು ಹರಸಾಹಸ ಪಟ್ಟರು.

ರಾಹುಲ್ ತಂದೆ ಲೋಕೇಶ್ ಕೂಡ ರಾಮನಗರ ಜಿಲ್ಲೆ ಮಾಗಡಿ ತಾಲೂಕು ಕಣ್ಣೂರು ಮೂಲದವರಾಗಿದ್ದು ಸಿದ್ಧಗಂಗಾ ಮಠದ ಭಕ್ತರಾಗಿದ್ದಾರೆ. ಶ್ರೀಸಿದ್ಧಲಿಂಗಸ್ವಾಮೀಜಿ ಅವರ ಪೂವಾಶ್ರಮದ ಊರು ಕೂಡ ರಾಮನಗರ ಜಿಲ್ಲೆಯೇ ಆಗಿದ್ದು ಈ ಬಗ್ಗೆ ಲೋಕಾಭಿರಾಮವಾಗಿ ಪರಸ್ಪರ ಚರ್ಚಿಸಿದರು.

ಕ್ರಿಕೆಟ್ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಶ್ರೀಸಿದ್ಧಲಿಂಗಸ್ವಾಮೀಜಿ ಅವರು ರಾಹುಲ್ ಪ್ರತಿಭೆಯನ್ನು ಪ್ರಶಂಸ್ಸಿಸಿ, ಆಶಿರ್ವದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net