ಕೆಎಸ್‌ಒಯು ಪ್ರವೇಶಾತಿಗೆ ಅವಕಾಶ

KSOU
Published on

ತುಮಕೂರು: ಕರಾಮುವಿಯು 2023-24ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2023ರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ.ಆರ್.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2023ರ ಸೆಪ್ಟೆಂಬರ್ 30ರ ವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗಿದೆ.

ಮಾಹಿತಿಗೆ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಮೆಳೆಕೋಟೆ, ತುಮಕೂರು. ದೂ.0816 2955580, ಮೊ.9844506629, 9886112434, 7349474339 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net