ಉಚಿತ ಲ್ಯಾಪ್‌ಟಾಪ್‌ಗಾಗಿ ಅರ್ಜಿ

laptop
ಸಾಂದರ್ಭಿಕ ಚಿತ್ರ
Published on

ತುಮಕೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಪೂರ್ವದಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ 2023-24ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕ ಕುಟುಂಬದ ಓರ್ವ ವಿದ್ಯಾರ್ಥಿಗೆ ಉಚಿತ ಲ್ಯಾಪ್ ಟಾಪ್ ನೀಡಲು ಅರ್ಜಿ ಆಹ್ವಾನಿಸಿದೆ.

ಕಾರ್ಮಿಕ ಅಧಿಕಾರಿ ತುಮಕೂರು ಉಪವಿಭಾಗ, ತುಮಕೂರು ಕಚೇರಿಯ ಕಾರ್ಯವ್ಯಾಪ್ತಿಯಲ್ಲಿ (ತುಮಕೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಕುಣಿಗಲ್) ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರು ಈ ಸೌಲಭ್ಯ ಪಡೆಯಬಹುದು.

ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಸೆ.20ರೊಳಗೆ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net