ಮಕ್ಕಳ ಕಲ್ಯಾಣ ಕ್ಷೇತ್ರದ ಸೇವೆಗೆ ರಾಜ್ಯ ಪ್ರಶಸ್ತಿ

Kids-boycotting-classes-as-parents-mark-virtual-bandh-1601455112
Published on

ತುಮಕೂರು: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ 25000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1 ಲಕ್ಷ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು.


ಅರ್ಜಿ ನಮೂನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಪಡೆದು ಸೆ. 27ರೊಳಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net