

ತುಮಕೂರು: ಪಾತಾಳಕ್ಕಿಳಿದಿರುವ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಬೇಕು ಹಾಗೂ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಅರಸೀಕೆರೆಯಿಂದ ಆರಂಭವಾಗಿರುವ ಪಾದಯಾತ್ರೆ ತುಮಕೂರು ತಲುಪಿತು.
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ಸಾವಿರಾರು ತೆಂಗು ಬೆಳೆಗಾರರು ಪಾದಯಾತ್ರೆ ಹೋರಾಟದಲ್ಲಿ ಭಾಗವಹಿಸಿದ್ದು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ರಾಜ್ಯ ಉಪಾಧ್ಯಕ್ಷ ಬಸವನಹಳ್ಳಿ ಭೈರೇಗೌಡ, ತಿಪಟೂರಿನ ಶಾಂತಕುಮಾರ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಧನಂಜಯ್ ಆರಾಧ್ಯ ಮತ್ತಿತರರು ನೇತೃತ್ವ ವಹಿಸಿದ್ದಾರೆ.