ಮತದಾರಪಟ್ಟಿಗೆ ಹೆಸರು ಸೇರ್ಪಡೆಗೆ ಶಿಕ್ಷಕ ಮತದಾರರಿಗೆ ಅವಕಾಶ

election logo
Published on

ತುಮಕೂರು: ಅರ್ಹ ಶಿಕ್ಷಕರು ಆಗ್ನೇಯ ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಯು ಆದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜತೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆ ಮತದಾರರ ಪಟ್ಟಿ ತಯಾರಿಕೆ, ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಹಾಗೂ ಇತರ ಚುನಾವಣಾ ವಿಷಯಗಳ ಕುರಿತ ಸಭೆ ನಡೆಯಿತು.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿದೆ. ನೋಂದಣಿಗೆ ಅವಕಾಶವಿದ್ದು ಅರ್ಹ ಶಿಕ್ಷಕರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಚುನಾವಣಾ ತಹಸೀಲ್ದಾರ್ ಎನ್.ಗೌರಮ್ಮ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net