

ತುಮಕೂರು: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು 2019ರ ಲೋಕಸಭಾ ಚುನಾವಣೆಯಲ್ಲಿ ನಾವು ಪಡೆದ ಫಲಿತಾಂಶ ಎಲ್ಲರ ಮುಂದೆಯೂ ಇದೆ ಹಾಗಾಗಿ, ಈಗಿನ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಲೂ ಬಿಜೆಪಿಗೆ ಅದೇ ಫಲಿತಾಂಶ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಈ ಮೈತ್ರಿ ರಾಜಕಾರಣವನ್ನು ರಾಜ್ಯದಲ್ಲಿ ಜನರು ಒಪ್ಪುವುದಿಲ್ಲ ಎಂದರು.
2019ರಲ್ಲಿ ದೇವೇಗೌಡರನ್ನು ಗೆಲ್ಲಿಸಲು ನಾವೆಲ್ಲರೂ ಕಷ್ಟಬಿದ್ದು ಕೆಲಸ ಮಾಡಿz್ದೆÃವೆ ಆದರೂ ಅವರಿಗೆ ಗೆಲುವು ಸಿಗಲಿಲ್ಲ. ಜೆಡಿಎಸ್ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನನ್ನ ಭೇಟಿ ಮಾಡಿದ್ದರು ಆದರೆ, ರಾಜಕೀಯದ ಬಗ್ಗೆ ಚರ್ಚಿಸಿಲ್ಲ ಎಂದು ಆಪರೇಷನ್ ಹಸ್ತದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕಳೆದ ಚುನಾವಣೆಯಲ್ಲಿ ದೇವೇಗೌಡರಿಗೆ ಕಷ್ಟï ಬಿದ್ದು ಕೆಲಸï ಮಾಡಿz್ದÁರೆ ಎಂದರು. ಮಾಜಿ ಶಾಸಕ ಗೌರಿಶಂಕರï ನನ್ನ ಭೇಟಿ ಮಾಡಿದ್ರು. ರಾಜಕೀಯ ಚರ್ಚೆ ಮಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.