ಕೋಳಿ ಸಾಕಾಣಿಕೆ ತರಬೇತಿ

poultry
Published on

ತುಮಕೂರು: ರುಡ್‌ಸೆಟ್ ಸಂಸ್ಥೆ ವತಿಯಿಂದ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದ್ದು, ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿ ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆ.5 ಕೊನೆಯ ದಿನ.

ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.9740982585, 9113880324, 9241482541, 8884554510 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net