

ತುಮಕೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ರಾಜ್ಯದಾದ್ಯಂತ ಭಾರತ ಸಂವಿಧಾನ ಪೀಠಿಕೆ ಸಾಮೂಹಿಕವಾಗಿ ಓದುವ ಮೂಲಕ ಆಚರಿಸಿ ಅರಿವು ಮೂಡಿಸಲಿದೆ.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸೆ.15ರಂದು ಬೆಳಗ್ಗೆ 10ಕ್ಕೆ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮ ಆಯೋಜಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಲು ಜಿಲ್ಲೆಯಲ್ಲಿ 10ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಇಚ್ಚೆಯಿಂದ ನೋಂದಣಿಯಾಗಿದ್ದಾರೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿರುವ ಭಾರತ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ.