ಸಚಿವೆ ಶೋಭಾಕರಂದ್ಲಾಜೆ ತುಮಕೂರು ಕ್ಷೇತ್ರದಲ್ಲಿ ಸ್ಫರ್ಧೆ??

Shobha
Published on

ತುಮಕೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾಕರಂದ್ಲಾಜೆ ಸ್ಪಷ್ಟಪಡಿಸಿದರು.

ತುಮಕೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತುಮಕೂರು ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಫರ್ಧೆ ಮಾಡುತ್ತೇನೆ ಎಂಬುದೆಲ್ಲಾ ಊಹಾಪೋಹಗಳಷ್ಟೇ ಎಂದರು.

ನಫೆಡ್ ಮೂಲಕ ಕನಿಷ್ಟ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಆರಂಭಿಸಲು ಮಾತ್ರ ಬಂದಿದ್ದೇನೆ ಇದರಲ್ಲಿ ಯಾವುದೇ ರಾಜಕೀಯ ಅಜೆಂಡಾ ಇಲ್ಲ, ಕ್ಷೇತ್ರ ಬದಲಾಯಿಸುವು ಅಗತ್ಯವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net