ಶಿರಾದಲ್ಲಿ ಮದ್ಯ ಮಾರಾಟ ನಿಷೇಧ

liquorsaledis
Published on

ತುಮಕೂರು: ಶಿರಾ ನಗರದಲ್ಲಿ ಅಕ್ಟೋಬರ್ 1ರಂದು ಹಿಂದೂ ಮಹಾಸಭಾ ಗಣಪತಿ ಮಂಡಳಿಯವರು ಗಣೇಶ ವಿಸರ್ಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಾದು ಹೋಗುವ ಪ್ರಮುಖ ಸ್ಥಳಗಳಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶಿರಾ ನಗರದ 5 ಕಿಮೀ ವ್ಯಾಪ್ತಿಯಲ್ಲಿ ಅಕ್ಟೋಬರ್ 1ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಜಿಲ್ಲಾಧಿಕಾರಿಕೆ.ಶ್ರೀನಿವಾಸ್ ಹೊರಡಿಸಿರುವ ಆದೇಶದ ಅನ್ವಯ ಕೆಎಸ್‌ಬಿಸಿಎಲ್ ಡಿಪೋ ಹೊರತುಪಡಿಸಿ ಎಲ್ಲಾ ತರಹದ ಮದ್ಯ ಮಾರಾಟ, ಸಾಗಾಣಿಕೆ ನಿಷೇಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net