ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

Sports
Published on

ತುಮಕೂರು: ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾಗವಹಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

ಅರ್ಹ ಕ್ರೀಡಾಪಟುಗಳು ಭರ್ತಿಮಾಡಿದ ಅರ್ಜಿಯನ್ನು ಸೆ.25ರೊಳಗೆ ಸಹಾಯಕ ನಿರ್ದೇಶಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು. ಇವರಿಗೆ ಸಲ್ಲಿಸಬೇಕು.

ಮಾಹಿತಿಗೆ ದೂ.0816 2278124 ಅಥವಾ ಮೊ.9741691379 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net