

ತುಮಕೂರು: ತಾಲೂಕಿನ ಬೆಳ್ಳಾವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೂಪರಿಂಟೆಂಡೆಂಟ್ ನಾಗರಾಜು(55) ಕಾಲೇಜಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಗುರುವಾರ ಬೆಳಗ್ಗೆ ಕಾಲೇಜಿಗೆ ದಿನಪತ್ರಿಕೆ ವಿತರಿಸಲು ತೆರಳಿದ್ದಾಗ ಸ್ಥಳೀಯರಿಗೆ ವಿಷಯ ತಿಳಿದಿದ್ದುನ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿ ತುಮಕೂರಿನ ಜಯನಗರದ ನಿವಾಸಿಯಾಗಿದ್ದು ಪತ್ನಿ, ಮಗ ಹಾಗೂ ಮಗಳನ್ನು ಅಗಲಿದ್ದಾರೆ.
ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಮೃತಪಟ್ಟ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.