

ತುಮಕೂರು: ತುಮಕೂರು ನಗರದ 20 ಮತ್ತು ಮಧುಗಿರಿ ಪಟ್ಟಣದ 6 ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ.ಸೆ.3ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12ರ ವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.30 ಗಂಟೆಯವರೆಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ.
ಬೆಳಗಿನ ಅವಧಿಯಲ್ಲಿ 4107 ಅಭ್ಯರ್ಥಿಗಳು ಮತ್ತು ಮಧ್ಯಾಹ್ನದ ಅವಧಿಯಲ್ಲಿ 5128 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಬರೆಯುವ ಎಲ್ಲಾ ಅಭ್ಯರ್ಥಿಗಳು ನಿಗಧಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗಬಹುದು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಘೋಷಿಸಿದ್ದಾರೆ.
ನಿಷೇಧಾಜ್ಞೆ ಸೆ.3ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಜಾರಿಯಲ್ಲಿರುತ್ತದೆ. ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬAದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.