

ತುಮಕೂರು: ಸಾಲಭಾದ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರಿನ ಮರಳೂರು ನಿವಾಸಿಗಳಾದ ಸಿದ್ದಗಂಗಯ್ಯ (62), ಸುನಂದಮ್ಮ(50) ಹಾಗೂ ಗೀತಾ(30) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.
ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ಸೋಮವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದುಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸಿದ್ದಗಂಗಯ್ಯ ಕಳೆದ ಎರಡು ವರ್ಷಗಳ ಹಿಂದೆ ಕೆಇಬಿ ಇಲಾಖೆಯಿಂದ ಸೇವಾ ನಿವೃತ್ತಿ ಹೊಂದಿದ್ದರು.ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆ.ಸಿ.ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.
ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳನ್ನು ಇಡಲಾಗಿದ್ದು ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.