ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

Death Case
Published on

ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಅಮಾನಿಕೆರೆ ಆವರಣದಲ್ಲಿ ಏ.1ರಂದು ನೇಣು ಬಿಗಿದ ಸ್ಥಿತಿಯಲ್ಲಿ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಗುಬ್ಬಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತನು 152 ಸೆಂ.ಮೀ. ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಈತನ ಮೈಮೇಲೆ ಕಪ್ಪು-ಕೆಂಪು-ಹಳದಿ ಹೂಗಳಿರುವ ತುಂಬು ತೋಳಿನ ಅಂಗಿ ಹಾಗೂ ಕಾಫಿ ಬಣ್ಣದ ಪ್ಯಾಂಟ್​ ಇರುತ್ತದೆ.

ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.08132 -222210, 08135- 275257, 0816- 2272451 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net