10ರಂದು 2ನೇ ಸುತ್ತಿನ ಕೌನ್ಸಿಲಿಂಗ್

Murarji School SVR
Published on

ತುಮಕೂರು: ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ಪ್ರವೇಶಾತಿಗೆ ಈಗಾಗಲೇ ಅರ್ಜಿ ಕರೆಯಲಾಗಿದೆ.


ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜನ್ನು ಆಯ್ಕೆ ಮಾಡಿ ದಾಖಲಾತಿ ಮಾಡಿಕೊಳ್ಳಲು ಜೂ.10ರಂದು ಬೆಳಗ್ಗೆ 10ಕ್ಕೆ ಕೋಡಿಮುz್ದೆÃನಹಳ್ಳಿ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ 2ನೇ ಸುತ್ತಿನ ಕೌನ್ಸಿಲಿಂಗ್ ಕರೆಯಲಾಗಿದೆ.


ಅರ್ಹತೆ ಪಡೆದ ವಿದ್ಯಾರ್ಥಿಗಳು ಕೌನ್ಸಿಲಿಂಗ್‌ಗೆ ಹಾಜರಾಗಲು ತಿಳುವಳಿಕೆ ಪತ್ರಗಳನ್ನು ಅರ್ಜಿ ಸಲ್ಲಿಸಿದ ಶಾಲೆ, ಕಾಲೇಜಿನಲ್ಲಿ ಪಡೆದು, ತಿಳುವಳಿಕೆ ಪತ್ರದಲ್ಲಿ ತಿಳಿಸಿದ ಎಲ್ಲಾ ಮೂಲ ದಾಖಲೆಗಳೊಂದಿಗೆ ನಿಗಧಿಪಡಿಸಿದ ಸಮಯಕ್ಕೆ ಕಡ್ಡಾಯವಾಗಿ ಹಾಜರಾಗಿ ಕಾಲೇಜನ್ನು ಆಯ್ಕೆ ಮಾಡಿಕೊಂಡು ದಾಖಲಾಗಲು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net