ಮತದಾರ ಪಟ್ಟಿ ಪರಿಷಕರಣೆಗೆ ಚಾಲನೆ; ಜನವರಿಗೆ ಅಂತಿಮ ಪಟ್ಟಿ

Election Commission
Published on

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಭಾರತ ಚುನಾವಣಾ ಆಯೋದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿರುತ್ತದೆ. 2024 ಜ.1ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

ಅ.10ರಂದು ನಮೂನೆ 1 ರಿಂದ 8 ಸಿದ್ಧಪಡಿಸುವಿಕೆ, ಅ.27ರಂದು ಕರಡು ಪಟ್ಟಿ ಪ್ರಕಟಿಸಲಾಗುತ್ತಿದ್ದು ದೂರು ಮತ್ತು ಆಕ್ಷೇಪಣೆ ಸಲ್ಲಿಸಲು ಡಿ.9ರ ವರೆಗೂ ಅವಕಾಶವಿದೆ. ಡಿ.26ರಂದು ದೂರು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ.

2024 ಜ.5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದ್ದು ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.

ಸಾರ್ವಜನಿಕರು ನಿವಾಸ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತದಾರರ ಪಟ್ಟಿಗಳಲ್ಲಿ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದು. ಮತದಾರರ ಪಟ್ಟಿ ಸೇರ್ಪಡೆಗೆ ನಮೂನೆ-6ರಲ್ಲಿ, ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡಗೆ ನಮೂನೆ-6ಎರಲ್ಲಿ, ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉz್ದೆÃಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ, ಹೆಸರು ತೆಗೆದು ಹಾಕಲು ನಮೂನೆ-7ರಲ್ಲಿ ಮತ್ತು ನಮೂನೆ 8ರಲ್ಲಿ ಮತದಾರರ ನಿವಾಸ ಬದಲಾವಣೆ ಅಥವಾ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಾಗಿ ಅಥವಾ ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್ ನೀಡುವಿಕೆ ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸುವುದಕ್ಕೆ ಮನವಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net