24ರಂದು ಕಾರ್ಯಾಗಾರ

job.jpg
Published on

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ದ್ವೀತಿಯ ಪಿಯು ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಹೆಚ್​ಸಿಎಲ್​, ಟೆಕ್ನಾಲಜೀಸ್​ನಲ್ಲಿ ಶಿಕ್ಷಣ ಜತೆಗೆ ಉದ್ಯೋಗದ ಅವಕಾಶ ಕಲ್ಪಿಸಲು ಆ.24ರಂದು ನಗರದ ಎಂಪ್ರೆಸ್​ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾರ್ಯಾಗಾರ ಹಮ್ಮಿಕೊಂಡಿದೆ.

ಕಾರ್ಯಾಗಾರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು 2024ನೇ ಸಾಲಿನ ದ್ವೀತಿಯ ಪಿಯುಸಿಯಲ್ಲಿ ಶೇ.70ಕ್ಕಿಂತ ಅಧಿಕ ಅಂಕ ಪಡೆದಿರುವ ವಾಣಿಜ್ಯ, ಕಲಾ ಮತ್ತು ವಿಜ್ಞಾನ ವಿಷಯದ ವಿದ್ಯಾರ್ಥಿಗಳು ಶಿಷ್ಯವೇತನ ಸಹಿತ ತರಬೇತಿ, ಖಾಯಂ ಉದ್ಯೋಗದ ಜತೆಗೆ ಉನ್ನತ ಶಿಕ್ಷಣ ಪಡೆಯಬಹುದು.

ಮಾಹಿತಿಗಾಗಿ ವೆಬ್​ಸೈಟ್​ https://bit.ly/TechBeeKSDC , ದೂ.8722790340, 9845454471 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net