ವಿಟಿಯು ವಿರುದ್ಧ ತುಮಕೂರಿನಲ್ಲಿ ಎಬಿವಿಪಿ ಪ್ರತಿಭಟನೆ

ABVP
Published on

ತುಮಕೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಹೆಚ್ಚಿಸಿರುವ ವಿದ್ಯಾರ್ಥಿಗಳ ಶುಲ್ಕವನ್ನು ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಇಂದು ಪ್ರತಿಭಟಿಸಲಾಯಿತು.

ಬಿಜಿಎಸ್ ವೃತ್ತದಿಂದ ಅಶೋಕ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಯ ವರೆಗೂ ಮೆರೆವಣಿಗೆಯಲ್ಲಿ ತೆರಳಿದ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶುಲ್ಕವನ್ನು ಕಡಿಮೆಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಭಾಗದ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್, ಇಂಜಿನಿಯರಿAಗ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಶೇ.25, ಅಂಕಪಟ್ಟಿ ಶುಲ್ಕವನ್ನು ಶೇ.100, ಪದವಿ ಸರ್ಟಿಫಿಕೇಟ್ ನೀಡಲು ಶೇ.50 ಶುಲ್ಕ ಏರಿಕೆ ಮಾತನಾಡಿದೆ ಇದು ವಿದ್ಯಾರ್ಥಿಗಳಿಗೆ ಮಾರಕವಾಗಿದೆ ಎಂದರು.

ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಗಣೇಶ್, ಗುರುಪ್ರಸಾದ್, ಲಿಖಿತ್, ಗುರು, ವೆಂಕಟೇಶ್, ವಿದ್ಯಾರ್ಥಿಗಳಾದ ಪೂಜಾ, ನಿತ್ಯಶ್ರೀ, ಜ್ಯೋತಿ, ರಚನಾ ಮತ್ತಿತರರು ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net