ಗುಜರಾತ್ ಬಿಜೆಪಿ ಜಯಭೇರಿಗೆ ತುಮಕೂರಿನಲ್ಲಿ ವಿಜಯೋತ್ಸವ

BJP_Celbration
Published on

ತುಮಕೂರು

ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಜಿಲಾ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ನಗರದಲ್ಲಿ ಸಂಭ್ರಮಿಸಿದರು.

ನಗರದ ಟೌನ್‌ಹಾಲ್ ವೃತ್ತದಲ್ಲಿ ಇಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಗುಜರಾತ್ ಅಭೂತಪೂರ್ವ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪರ ಜಯಘೋಷಣೆಗಳನ್ನು ಕೂಗಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ರವಿಶಂಕರ್, ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಅಧಿಕ ಸ್ಥಾನಗಳಲ್ಲಿ ಜಯಗಳಿಸಿದೆ. ಕೇಂದ್ರ ಹಾಗು ಅಲ್ಲಿನ ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳ ಹಿನ್ನೆಲೆಯಲ್ಲಿ ಅಲ್ಲಿನ ಜನತೆ ಬಿಜೆಪಿ ಪಕ್ಷದ ಆಡಳಿತದ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ಅಧಿಕಾರ ನೀಡಿದ್ದಕ್ಕಾಗಿ ಗುಜರಾತಿಗರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕಾಹುಲಿನಾಯ್ಕರ್, ಟೂಡಾ ಮಾಜಿ ಅಧ್ಯಕ್ಷ ಬಿ.ಎಸ್.ನಾಗೇಶ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಟಿ.ವೈ.ಯಶಸ್, ಪಾಲಿಕೆ ಸದಸ್ಯ ಎಚ್. ಮಲ್ಲಿಕಾರ್ಜುನಯ್ಯ, ಮುಖಂಡರಾದ ರುದ್ರೇಶ್, ವೇದಮೂರ್ತಿ, ಬನಶಂಕರಿ ಬಾಬು, ವಿರೂಪಾಕ್ಷಪ್ಪ, ಗೋಪಿ, ಶಬ್ಬೀರ್‌ಅಹ್ಮದ್, ವಿಶ್ವನಾಥ್, ರಾಮಚಂದ್ರರಾವ್, ಚನ್ನಬಸಪ್ಪ, ವಿಶಾಲಕ್ಷಮ್ಮ, ನಾಗೇಂದ್ರ, ಕಾವ್ಯ, ಸೌಭಾಗ್ಯಮ್ಮ, ಅಕ್ಷಯ ಚೌದರಿ, ಪ್ರತಾಪ್ ಮಲ್ಲಣ್ಣ, ಪ್ರವೀಣ್, ವಿನಯ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net