ಕಾಂಗ್ರೆಸ್ ಟಿಕೆಟ್ ಕೇಳಿದ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ

777777777777
Published on

ತುಮಕೂರು: ಶಿರಾ ಕ್ಷೇತ್ರದಲ್ಲಿ ಕಾಡುಗೊಲ್ಲ ಸಮುದಾಯದ ಡಾ.ಸಾಸಲು ಸತೀಶ್‌ಗೆ, ಚಿಕ್ಕನಾಯಕನಹಳ್ಳಿಯಲ್ಲಿ ಉಪ್ಪಾರ ಸಮುದಾಯದ ಆರ್.ರೇಣುಕಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಶ್ರೀನಿವಾಸ್ ಆಗ್ರಹಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ನಗರದಲ್ಲಿ ಇಂದು ಒಬಿಸಿ ಮುಖಂಡರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೇಳಿದ್ದು ಟಿಕೆಟ್ ತಪ್ಪಿಸಿದರೆ ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಕಾಂಗ್ರೆಸ್ ಎದುರಿಸಲಿದೆ ಎಂದು ಎಚ್ಚರಿಕೆ ಕೂಡ ರವಾನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಆರ್.ರೇಣುಕಯ್ಯ, ಧನಿಯಾಕುಮಾರ್, ರಾಜ್ಯ ಪ್ರವರ್ಗ 1ರ ಜಾತಿಗಳ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಎಚ್.ವಿ.ಬಂಡಿ, ಮುಖಂಡರಾದ ಗಂಗಪ್ಪ, ಮಂಜುನಾಥ್, ಯೋಗೇಶ್, ರಾಜೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net