ಬಜೆಟ್​ ವಿರೋಧಿಸಿ ಬಿಜೆಪಿ ಟ್ರ್ಯಾಕ್ಟರ್​ ಮೆರವಣಿಗೆ

Bjp_Protest
Published on

ತುಮಕೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಈ ಸಾಲಿನ ಬಜೆಟ್​ ರೈತ ವಿರೋಧಿ, ದಲಿತ ವಿರೋಧಿ, ಜನ ವಿರೋಧಿ, ಹಿಂದು ವಿರೋಧಿ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಿ ಪ್ರತಿಭಟಿಸಲಾಯಿತು.

ನಗರದ ಟೌನ್​ ಹಾಲ್​ ವೃತ್ತದಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಟ್ರಾ$್ಯಕ್ಟರ್​ ಏರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಒಂದು ಸಮುದಾಯವನ್ನು ತುಷ್ಟೀಕರಣ ಮಾಡುವ ರಾಜ್ಯ ಕಾಂಗ್ರೆಸ್​ ಸರ್ಕಾರದ ಬಜೆಟ್​ ವಿರುದ್ಧ ಆಕ್ರೋಶ ಹೊರಹಾಕಿ ಘೋಷಣೆಗಳನ್ನು ಕೂಗಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಚ್​.ಎಸ್​.ರವಿಶಂಕರ್​, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ ಮತ ಬ್ಯಾಂಕ್​ ರಾಜಕಾರಣಕ್ಕೋಸ್ಕರ. ಅಲ್ಪಸಂಖ್ಯಾತರನ್ನು ಓಲೈಸಿರುವ ಹಿಂದು ವಿರೋಧಿ ಎಂಬುದನ್ನು ಈ ಮೂಲಕ ಸಾಬೀತು ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಬಜೆಟ್​ನಲ್ಲಿ ರೈತರು, ದಲಿತರು, ಜನಸಾಮಾನ್ಯರ ಹಿತವನ್ನು ಸಂಪೂರ್ಣವಾಗಿ ಮರೆತು ಎಲ್ಲರನ್ನೂ ವಂಚಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಈ ಬಜೆಟ್​ನಲ್ಲಿ ದಲಿತರಿಗೆ ಯಾವುದೇ ವಿಶೇಷ ಸೌಲಭ್ಯಘೋಷಣೆ ಮಾಡದೆ ದಲಿತರ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್​ ಸರ್ಕಾರದ ದಲಿತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಡಾ.ಬಿ.ಆರ್​.ಅಂಬೇಡ್ಕರ್​ ಅವರಿಗೆ ಮೋಸ ಮಾಡಿ, ಅವರು ರಚಿಸಿದ ಸಂವಿಧಾನಕ್ಕೆ ಕಾಂಗ್ರೆಸ್ಸಿಗರು ಅಪಚಾರ ಎಸಗಿದ್ದಾರೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಾದ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ದಲಿತರಿಗೆ ನೀಡಬೇಕಾದ ಆದ್ಯತೆ ನೀಡಿಲ್ಲ. ಹಿಂದು ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ಬಿಜೆಪಿ ರೈತ ಮೋರ್ಚಾರಾಜ್ಯಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ಹಿಂದುಳಿದ ಹರಿಕಾರ ದೇವರಾಜ ಅರಸು ಮುಖವಾಡ ಹೊತ್ತು ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ, ಅರಸು ಅವರ ಯಾವ ತತ್ವಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳದೆ ಕೇವಲ ಮುಸ್ಲಿಂಮರ ಓಲೈಕೆಯಲ್ಲಿ ತೊಡಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ದ್ರೋಹ. ಮತ ರಾಜಕಾರಣ ಮಾಡಿಕೊಂಡು ಬಂದಿರುವ ಕಾಂಗ್ರೆಸ್​ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಇಂತಹ ಅನ್ಯಾಯ ಮಾಡುತ್ತಿರುವ ಸರ್ಕಾರವನ್ನುರಾಜ್ಯದ ಜನ ಕ್ಷಮಿಸುವುದಿಲ್ಲ ಎಂದರು.

ಎಸ್​.ಸಿ. ಮೋರ್ಚಾಜಿಲ್ಲಾಧ್ಯಕ್ಷ ಎಚ್​.ಎ.ಆಂಜನಪ್ಪ ಮಾತನಾಡಿ, ಬಹುಸಂಖ್ಯೆಯ ದಲಿತ ಸಮುದಾಯ ಕಡೆಗಣಿಸಿರುವ ಕಾಂಗ್ರೆಸ್​ ಸರ್ಕಾರ ಈ ಬಜೆಟ್​ನಲಿ ್ಲಅಲ್ಪಸಂಖ್ಯಾತರಿಗೆ ಹೆಚ್ಚಿನ ಸವಲತ್ತು ನೀಡಿದೆ. ಈ ಸರ್ಕಾರದಿಂದ ದಲಿತರಿಗೆ ಅನ್ಯಾಯವಾಗುತ್ತಲೇಇದೆ. ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಅನ್ಯಾಯವೆಸಗಲಾಗಿದೆ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಂಗರಾಜು, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ರೈತ ಮೋರ್ಚಾಜಿಲ್ಲಾಧ್ಯಕ್ಷ ಸಿದ್ಧರಾಮಣ್ಣ, ಮುಖಂಡರಾದ ಸಾಗರನಹಳ್ಳಿ ವಿಜಯಕುಮಾರ್​, ಎಚ್​.ಎಂ.ರವೀಶಯ್ಯ, ಧನುಷ್​, ಟಿ.ಎಚ್​.ಹನುಮಂತರಾಜು, ಸತ್ಯಮಂಗಲ ಜಗದೀಶ್​, ಸಿ.ಎನ್​.ರಮೇಶ್​, ವಿಷ್ಣುವರ್ಧನ್​, ಪುಟ್ಟರಾಜು, ಮಂಜುನಾಥ್​, ಗಣೇಶ್​ಪ್ರಸಾದ್​, ಪ್ರೇಮಾ ಹೆಗಡೆ, ಲತಾಬಾಬು, ನಾಗರತ್ನಮ್ಮ, ಗಾಯತ್ರಿ, ವಸಂತ, ಶಿವಕುಮಾರ್​, ವೆಂಕಟೇಶಾಚಾರ್​, ರಾಜಶೇಖರ್​, ಊರ್ಡಿಗೆರೆರವಿ, ನಿಸರ್ಗರಮೇಶ್​, ಹನುಮಂತರಾಜು ಮೊದಲಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net