

ತುಮಕೂರು: ಮಹಿಳೆಯೊಬ್ಬಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗುತ್ತಿದ್ದ ಕಳ್ಳರನ್ನು ಗ್ರಾಮಸ್ಥರೇ ಹಿಡಿದು ಅಡಕೆ ಮರಕ್ಕೆ ಕಟ್ಟಿದ ಘಟನೆ ತುರುವೇಕೆರೆ ತಾಲೂಕು ಹಾಲುಗೊಂಡನಹಳ್ಳಿಯಲ್ಲಿ ಇಂದು ನಡೆದಿದೆ.
ಸುಜಾತ ಎಂಬುವರು ಮಧ್ಯಾಹ್ನ ತೋಟಕ್ಕೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಹಿಂಬಾಲಿಸುತ್ತಿದ್ದ ಇಬ್ಬರು ಸರಕಳ್ಳರು ಕಣ್ಣಿಗೆ ಖಾರದಪುಡಿ ಎರಚಿ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಎಗರಿಸಿದರು.
ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದಾಗ ಈ ವೇಳೆ ಸಹಾಯಕ್ಕಾಗಿ ಕೂಗಿಕೊಂಡ ಮಹಿಳೆಯ ಧ್ವನಿ ಕೇಳಿ ಅಕ್ಕಪಕ್ಕದಲ್ಲಿದ್ದ ಜನರು ಕಳ್ಳರನ್ನು ಬೈಕ್‌ನಲ್ಲಿ ಹಿಂಬಾಲಿಸಿ ಸಿನಿಮೀಯ ರೀತಿ ಕಳ್ಳರನ್ನು ಹಿಡಿದು ಮರಕ್ಕೆ ಕಟ್ಟಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.