ಜೂನಿಯರ್ ಕಾಲೇಜು ಮೈದಾನ ಸ್ಮಾರ್ಟ್ ಅಭಿವೃದ್ಧಿ

28.....
Published on

ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜು ಮೈದಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 7 ಕೋಟಿ ರೂ., ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ, ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.
ಬಿ.ಎಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಮತಬೇಟೆ ಆರಂಭಿಸಿದ ಜ್ಯೋತಿಗಣೇಶ್, ಸರ್ಕಾರಿ ಜೂನಿಯರ್ ಕಾಲೇಜು ಮೈದಾನವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗಿದೆ. ಕ್ರೀಡೆ ಮತ್ತು ವ್ಯಾಯಾಮ ಉಪಕರಣಗಳು, ಹಿರಿಯರ ಮತ್ತು ಮಕ್ಕಳ ಉದ್ಯಾನವನ (ಆಲದ ಮರದ ಪಾರ್ಕ್) ಹಾಗೂ ಕ್ರೀಡಾಂಗಣದಲ್ಲಿ ಫ್ಲಡ್‌ಲೈಟ್ ಅಳವಡಿಕೆ, ಹೈಮಾಸ್ತ್ ದೀಪಗಳನ್ನು ಅಳವಡಿಸಲಾಗಿದೆ. ಸುವ್ಯವಸ್ಥಿತವಾದ ವೇದಿಕೆಯನ್ನು ನಿರ್ಮಾಣ ಮಾಡುವ ಸಾರ್ವಜನಿಕರ ಸದ್ಭಳಕೆಗೆ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ರಾಷ್ಟಿçÃಯ ಹಬ್ಬಗಳನ್ನು ಜೂನಿಯರ್ ಕಾಲೇಜು ಮೈದಾನದಲ್ಲೇ ಆಚರಿಸಬೇಕಾಗಿರುವುದರಿಂದ ಇದಕ್ಕೆ ಪೂರಕವಾದ ವೇದಿಕೆ ಹಾಗೂ ಗಣ್ಯರ ವಿಶ್ರಾಂತಿ ಕೊಠಡಿಯನ್ನು ನಿರ್ಮಾಣ ಮಾಡಲಾಗಿದೆ. ವಾಲಿಬಾಲ್, ಖೋ-ಖೋ ಕ್ರೀಡಾಂಗಣಗಳನ್ನು ಪ್ರತ್ಯೇಕವಾಗಿ ಅಭಿವೃದ್ಧಿ ಪಡಿಸಿದ್ದು ಕ್ರೀಡಾಪಟುಗಳ ಅಭ್ಯಾಸಕ್ಕೆ ಕ್ರೀಡಾಕೂಟಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮತ್ತೊಮ್ಮೆ ಆಶೀರ್ವದಿಸಿ:
ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ವಾಯು ವಿಹಾರಿಗಳನ್ನು ಭೇಟಿ ಮಾಡಿ, ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗೆ ಮನವರಿಕೆ ಮಾಡಿಕೊಟ್ಟ ಜ್ಯೋತಿಗಣೇಶ್, ಈ ಬಾರಿ ನನಗೆ ಮತ್ತೊಮ್ಮೆ ಅಶೀರ್ವಾದ ಮಾಡುವಂತೆ ವಿನಂತಿ ಮಾಡಿದರು. ನಂತರ ಫಿಟ್ನೆಸ್ ಸೆಂಟರ್‌ಗೆ ಭೇಟಿ ನೀಡಿದರು. ಇಡೀ ದಿನ ವಿವಿಧ ಬಡಾವಣೆಗಳಲ್ಲಿ ಸುತ್ತಾಡಿ ಮತಯಾಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net