ಕರೊನಾ ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರಿಗೆ ಬಿಗ್‌ರಿಲಿಫ್!?

JCM with Aaraga
Published on

ತುಮಕೂರು: ಕರೊನಾ ಲಾಕ್‌ಡೌನ್ ಸಂದರ್ಭದಲ್ಲಿ ರಸ್ತೆಗಿಳಿದ ಸಾರ್ವಜನಿಕರ ಮೇಲೆ ದಾಖಲಾದ ದೂರುಗಳನ್ನು ವಾಪಸ್ ಪಡೆಯುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಚಿಕ್ಕನಾಯಕನಹಳ್ಳಿಯಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕರೊನಾ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿರುವ ಸಾವಿರಾರು ಪ್ರಕರಣಗಳು ನ್ಯಾಯಾಲಯದಲ್ಲಿ ಒತ್ತಡಕ್ಕೆ ಕಾರಣವಾಗಿವೆ ಎಂದರು.

ಕರೊನಾನಿಬಂಧಗಳನ್ನು ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ಹಿಂತೆಗೆಯುವ ಅಗತ್ಯವಿದ್ದು ಇದರಿಂದ ಪೊಲೀಸ್ ಇಲಾಖೆ, ಸಾರ್ವಜನಿಕರೂ ಮತ್ತು ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಗೃಹ ಸಿಚವ ಆರಗ ಜ್ಞಾನೇಂದ್ರ ಕೂಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net