ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

DC_Meeting
Published on

ತುಮಕೂರು: ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಉದ್ದೇಶಿತ 90 ಕಿ. ಮೀ ಉದ್ದದ ಮಾನವ ಸರಪಳಿ ರಚನೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ತಪ್ಪದೇ ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಮಾನವ ಸರಪಳಿಯಲ್ಲಿ ಪಾಲ್ಗೊಳ್ಳದ ಅಧಿಕಾರಿ, ಸಿಬ್ಬಂದಿವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್​ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ನಿರ್ದೇಶನದಂತೆ ರಾಜ್ಯಾದಾತ್ಯಂತ ಬೀದರ್​ನಿಂದ ಚಾಮರಾಜನಗರದವರೆಗೆ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಮಾನವ ಸರಪಳಿಯನ್ನು ಏಕ ಕಾಲದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ 90 ಕಿ.ಮೀ., ಮಾನವ ಸರಪಳಿಯನ್ನು 1 ಲಕ್ಷ ಜನರ ಪಾಲ್ಗೊಳ್ಳುವಿಕೆಯಿಂದ ನೆರವೇರಿಸಲಾಗುತ್ತಿದೆ ಎಂದರು.

ಶಿರಾ ಮತ್ತು ತುಮಕೂರು ತಾಲ್ಲೂಕಿನ ತಹಸೀಲ್ದಾರ್​, ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ, ಸ್ಥಳಿಯವಾಗಿ ಆಯಾ ತಾಲ್ಲೂಕು ವ್ಯಾಪ್ತಿಯ ಜವಾಬ್ದಾರಿಯನ್ನು ವಹಿಸಲಾಗಿದೆ. ಪ್ರತಿ 30 ಕಿ.ಮೀ.ಗೆ ಒಬ್ಬರಂತೆ 3 ಮಂದಿ ಉಪ ವಿಭಾಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net