

ತುಮಕೂರು: ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಫೆ.11 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಆದ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ.ಗೀತಾ ತಿಳಿಸಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯಲಿದೆ ಎಂದರು.
ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದೆ ಎಂದರು.
ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿ ದೂ.08162255133, ಮೊ.9141193959 ಸಂಪರ್ಕಿಸಬಹುದು.