ಭಾರತ್ ಜೋಡೋ ಯಾತ್ರೆಯಲ್ಲಿ ಜೆಡಿಎಸ್ ಶಾಸಕ ಕಾಂಗ್ರೆಸ್‌ಗೆ!?

gubbi srinivas hdk
Published on

ತುಮಕೂರು: ಗುಬ್ಬಿ ಕ್ಷೇತ್ರದ ಗುಬ್ಬಿ ಕ್ಷೇತ್ರದ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ವೇದಿಕೆ ಸಿದ್ಧವಾಗಿದೆ ಎಂಬ ಊಹಾಪೋಹ ಹರಿದಾಡುತ್ತಿದೆ.

ಎಐಸಿಸಿ ನಾಯಕ ರಾಹುಲ್‌ಗಾಂಧಿ ಗುಬ್ಬಿ ಕ್ಷೇತ್ರದಲ್ಲಿ ಪಾದಯಾತ್ರೆಯಲ್ಲಿ ಹಾದುಹೋಗಲಿದ್ದು ಈ ಸಂದರ್ಭದಲ್ಲಿ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಬೆಂಬಲಿಗರೆಲ್ಲಾ ಭಾಗವಹಿಸಲು ಸಿದ್ಧರಾಗಿದ್ದು ಇದಕ್ಕೆ ಪೂರಕವಾಗಿ ಪಕ್ಷದ ಪದಾಧಿಕಾರಿಗಳೆಲ್ಲಾ ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಆರ್.ಶ್ರೀನಿವಾಸ್ ಮಾತ್ರ ಡಿಸೆಂಬರ್‌ನಲ್ಲಿ ನಾನು ಕಾಂಗ್ರೆಸ್ ಸೇರುವ ಬಗ್ಗೆ ತೀರ್ಮಾನಿಸುತ್ತೇನೆ, ನಮ್ಮ ಮುಖಂಡರು, ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net