

ಚಿಕ್ಕನಾಯಕನಹಳ್ಳಿ: ಬಿಸಿಲಿನ ಝಳದಲ್ಲಿಯೂ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಬಿಜೆಪಿ ಅಭ್ಯರ್ಥಿ ಜೆ.ಸಿ.ಮಾಧುಸ್ವಾಮಿ ಹುಳಿಯಾರು ಹೋಬಳಿಯ ಹಲವು ಗ್ರಾಮಗಳಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ಕೋರಗೆರೆಯಲ್ಲಿ ಮತದಾರರನ್ನು ಮಾತನಾಡಿ, ಅವರು, ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಇನ್ನೂ ಸಾಕಷ್ಟು ಕೆಲಸಗಳನ್ನು ಮಾಡಲು ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಎಲ್ಲಾ ಗ್ರಾಮಗಳ ಕೆರೆಗಳಿಗೂ ಶಾಶ್ವತ ನೀರಾವರಿ ಒದಗಿಸುವ ನಮ್ಮ ಕನಸು ಬಹುತೇಕ ಈಡೇರಿದೆ, ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ಜನರ ಸಂಪರ್ಕಕ್ಕೆ ಅನುಕೂಲವಾಗಿದ್ದು ಈ ಭಾಗದಲ್ಲಿ ಅಮೂಲಾಗ್ರವಾದ ಬದಲಾವಣೆಯಾಗಲಿದೆ ಎಂದರು.
ತಾಲೂಕಿನ ಯುವಕರಿಗೆ ಉದ್ಯೋಗ ಸೃಷ್ಠಿಸುವ ಕೆಲಸವಾಗಬೇಕು, ಸ್ಥಳೀಯ ಬೆಳೆಗಳ ಮೌಲ್ಯವರ್ಧನೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುವ ಕನಸುಗಳಿದ್ದು ಮತದಾರರು ಬಿಜೆಪಿಗೆ ಮತ ನೀಡಿ ನನಗೆ ಶಕ್ತಿ ನೀಡಬೇಕು ಎಂದು ಮನವಿ ಮಾಡಿದರು.
ತಾಲೂಕಿನ ಸಾಕಷ್ಟು ದೇವಾಲಯಗಳಿಗೆ ಮುಜರಾಯಿ ಇಲಾಖೆಯಿಂದ ಅನುದಾನ ನೀಡಲಾಗಿದೆ, ವಸತಿ ಶಾಲೆಗಳು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣವಾಗಿವೆ, ಮಿನಿವಿಧಾನಸೌಧ ಎದ್ದು ನಿಂತಿದೆ ಎಂದು ಈಗಾಗಲೇ ಮುಗಿಸಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನೇ ಹೇಳಿದರು.
ಸ್ಥಳೀಯ ಮುಖಂಡ ಬರಕನಾಳು ವಿಶ್ವನಾಥ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಲು ನಮ್ಮ ನಾಯಕರಾದ ಜೆ.ಸಿ.ಮಾಧುಸ್ವಾಮಿ ಅವರ ಸಮರ್ಥ ವಾದ ಕೂಡ ಕಾರಣವಾಗಿತ್ತು, ಮುಂದಿನ ದಿನದಲ್ಲಿಯೂ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಸ್ಥಾನ ಪಡೆಯುವ ಸಮರ್ಥ ನಾಯಕರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕು ಎಂದರು.
ಸತತ ಬರದಿಂದ ಕಂಗೆಟ್ಟಿದ್ದ ಹುಳಿಯಾರು ಹೋಬಳಿಯ ಕೆರೆಗಳಿಗೆ ಹೇಮಾವತಿ ನೀರು ಹರಿದ ಹಿನ್ನೆಲೆಯಲ್ಲಿ ಈಭಾಗದ ರೈತರ ತೋಟಗಳು ಉಳಿದವು, ಈಗಾಗಲೇ ಪೈಪ್‌ಲೈನ್ ಕಾಮಗಾರಿ ಮುಗಿದಿರುವ ಕೆರೆಗಳಿಗೂ ನೀರು ಹರಿಯಲಿದೆ ಎಂದರು.