

ತುಮಕೂರು: ಕೊರಟಗೆರೆ ಪಟ್ಟಣದಲ್ಲಿ ಬುಧವಾರ ಬಿಜೆಪಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾಷಣದ ತುಣಕನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಬಿಜೆಪಿ ಮಂಡಲ ಪೊಲೀಸರಿಗೆ ದೂರು ನೀಡಿದೆ.
ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂಬ 28 ಸೆಕೆಂಡ್‌ಗಳ ಸಿಎಂ ಹೇಳಿಕೆಯನ್ನು ತಿರುಚಿ ಶಾಸಕ ಡಾ.ಜಿ.ಪರಮೇಶ್ವರ್ ಅವರನ್ನು ಮತ್ತೆ ಗೆಲ್ಲಿಸಿ ಎಂದು ತಿರುಚಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.