ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ: 1 ವರ್ಷದ ಹೆಣ್ಣು ಮಗು ಸೇರಿ 13 ಮಂದಿ ದುರ್ಮರಣ

TMK Accident 6 mar 20
Published on

ತುಮಕೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದು ವರ್ಷದ ಹೆಣ್ಣು ಮಗು ಸೇರಿದಂತೆ 13 ಮಂದಿ ಸಾವಿಗೀಡಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಇಂದು ನಸುಕಿನ ಜಾವ 2.30ರ ಸುಮಾರಿಗೆ ಕುಣಿಗಲ್​ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ‌ ಬ್ರಿಝಾ ಕಾರು ಹಾಗೂ ಧರ್ಮಸ್ಥಳದಿಂದ ತಮಿಳುನಾಡಿಗೆ ಹಿಂದಿರುಗುತ್ತಿದ್ದ ಟವೇರಾ ಕಾರು ನಡುವೆ ಅಪಘಾತ ಸಂಭವಿಸಿದೆ.

ಬ್ರಿಝಾ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಬಲಭಾಗದಲ್ಲಿ ಬರುತ್ತಿದ್ದ ಟವೇರಾಗೆ ಗುದ್ದಿದೆ. ಬ್ರಿಝಾ ಕಾರಿನಲ್ಲಿದ್ದವರು ಬೆಂಗಳೂರಿನ ದೊಡ್ಡಾಲದ ಮರದ ಬಳಿಯ ರಾಮನಹಳ್ಳಿಯವರಾಗಿದ್ದು, ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಟವೇರಾದಲ್ಲಿದ್ದವರು ತಮಿಳುನಾಡಿನ ಹೊಸೂರು ಮೂಲದವರಾಗಿದ್ದು, ಟವೇರಾದಲ್ಲಿದ್ದ 13 ಜನರಲ್ಲಿ 10 ಜನ ಸ್ಥಳದಲ್ಲೇ ಸಾವಿಗೀಡಾಗಿ, 3 ಜನರಿಗೆ ಗಂಭೀರ ಗಾಯಗಳಾಗಿವೆ.

ಟವೇರಾ ಕಾರಿನಲ್ಲಿದ್ದ ಮೃತಪಟ್ಟವರ ಗುರುತು
ಮಂಜುನಾಥ್ (35), ತನುಜ (25), ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14) ಹಾಗೂ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಉಳಿದ ಶ್ವೇತಾ (32), ಹರ್ಪಿತಾ (12), ಮಾಲಾಶ್ರೀ (4) ಹಾಗೂ ಗಂಗೋತ್ರಿ (14) ಗಂಭೀರವಾಗಿ ಗಾಯಗೊಂಡಿದ್ದಾರೆ.

ಬ್ರಿಝಾ ಕಾರಿನಲ್ಲಿ ಮೃತಪಟ್ಟವರ ಗುರುತು
ಲಕ್ಷ್ಮಿ ಕಾಂತ್ (24), ಸಂದೀಪ (36) ಹಾಗೂ ಮಧು (28) ಎಂಬುವರು ಸಾವಿಗೀಡಾಗಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net