ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

MADU
Published on

ಮಧುಗಿರಿ: ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಅಪರಾಧಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ಕರಕೇರ ಅವರು ಜೀವಾವಧಿ ಶಿಕ್ಷೆ ಮತ್ತು ತಲಾ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು.

ಪಾವಗಡ ತಾಲೂಕಿನ ನೇರೆಳೆಕುಂಟೆ ರಾಮಾಂಜಿ( 40), ಸುಬ್ಬಮ್ಮ (58), ಜೀವಾವಧಿ ಶಿಕ್ಷೆಗೊಳಗಾದವರು.

2019 ಫೆಬ್ರವರಿ 17 ರಂದು ಅಂಜಿನಪ್ಪನ ಹಣೆ ಮತ್ತು ಬಲಕಿವಿಯ ಬಳಿಗೆ ಜೋರಾಗಿ ಹೊಡೆದು ಕೊಲೆ ಮಾಡಲಾಗಿತ್ತು. ಸಿಪಿಐ ವೆಂಕಟೇಶ್ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು,ಸರ್ಕಾರದ ಪರವಾಗಿ ಅಭಿಯೋಜಕ ಬಿ.ಎಂ. ನಿರಂಜನಮೂರ್ತಿ ವಾದಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net