ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ

WEB_DEATH
Published on

ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಇಂದು ನಡೆದಿದೆ.


ಮಧುಗಿರಿ ತಾಲ್ಲೂಕಿನ ಕವಣದಾಲದ ತಾಯಿ ಪುಷ್ಪಲತಾ (30) ,ಹೇಮಾ (9),ಶೇಖರ್ (7) ಮೃತ ದುರ್ದೈವಿಗಳು. ನಿನ್ನೆ ಸಂಜೆ ಅರಕೆರೆ ಗ್ರಾಮದಲ್ಲಿರೋ ಸಹೋದರನ ಮನೆಗೆ ಬಂದಿದ್ದ ಮೃತ ಪುಷ್ಪಲತಾ.


ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರಬಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net